ಸಿನಿಮಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸುವುದಾಗಿ ಪ್ರಕಟಿಸಿದೆ.
ಪುನೀತ್ ರಾಜ್ ಕುಮಾರ್ ನಿಧನದ ನಂತರ ಅವರ ಮೊದಲ ಜಯಂತಿಗೆ ವಾರದ ಮೊದಲು ಗೌರವ ಡಾಕ್ಟರೇಟ್ ಲಭಿಸಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.
ಇದೇ ತಿಂಗಳು 22 ರಂದು ನಡೆಯಲಿರುವ ವಿವಿಯ 102 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ