ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿಗಳು ಗರಿಗೆದರಿದ್ದವು. ಆದರೆ ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಸುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ.
ಪಂಚರಾಜ್ಯ ಚುನಾವಣೆಯ ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿದ್ಧರಿರುವುದಾಗಿ ಸೋನಿಯಾ ಅವರು ತಿಳಿಸಿದ್ದರು. ಆದರೆ ಕಾರ್ಯಕಾರಣಿ (ಸಿಡಬ್ಲ್ಯುಸಿ) ಅದನ್ನು ಒಪ್ಪಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ. ಪಕ್ಷದ ಆಂತರಿಕ ಚುನಾವಣೆ ನಡೆಯುವವವರೆಗೆ ಅಧ್ಯಕ್ಷರಾಗಿ ಮುಂದುವರೆಯುವಂತೆ ಸಿಡಬ್ಲ್ಯುಸಿ ನಾಯಕರು ಸೋನಿಯಾ ಅವರಿಗೆ ಮನವಿ ಮಾಡಿದ್ದಾರೆ.
ಸೋನಿಯಾ ನಾಯಕತ್ವದಲ್ಲಿ ನಮಗೆಲ್ಲರಿಗೂ ನಂಬಿಕೆಯಿದೆ ಎಂದು ಸಭೆಯಲ್ಲಿ ಪಾಲದ್ಗೊಂಡಿದ್ದ ಮುಖಂಡರು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಅವರ ಜತೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಸಿ ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಪಿ ಚಿದಂಬರಂ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ