ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಪ್ರಸ್ತಾವನೆ ಸಲ್ಲಿಸಿದ್ದು, ಶಿಕ್ಷಣ ಇಲಾಖೆ ಒಂದು ಬಾರಿ ವರ್ಗಾವಣೆಗೆ ಅವಕಾಶ ನೀಡುವ ಕುರಿತು ಕ್ರಮ ಕೈಗೊಂಡಿದೆ ಎನ್ನಲಾಗಿದೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ಒಂದೇ ಬಾರಿಗೆ ಅನ್ವಯವಾಗುವಂತೆ ಶಿಕ್ಷಕರನ್ನು ವರ್ಗಾವಣೆ ಮಾಡಬೇಕೆಂದು ಬೇಡಿಕೆ ಇದೆ.
ಪ್ರಾಥಮಿಕ ಶಾಲೆಗಳ 2,702 ಶಿಕ್ಷಕಿಯರು, 3,484 ಶಿಕ್ಷಕರು ತಮ್ಮ ಜಿಲ್ಲೆಗಳಿಗೆ ವರ್ಗಾವಣೆಯಾಗಲು ಬಯಸಿದ್ದಾರೆ. ಪ್ರೌಢಶಾಲೆಗಳ1,940 ಶಿಕ್ಷಕರು, 964 ಶಿಕ್ಷಕಿಯರು ತಮ್ಮ ಜಿಲ್ಲೆಗೆ ವರ್ಗಾವಣೆಗೆ ಬಯಸಿದ್ದಾರೆ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ