ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳು ಹೋರಾಟದಲ್ಲಿ ಭಾಗವಹಿಸುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ.
ಅಂದು ಹೆಜಮಾಡಿ ಟೋಲ್ ಕೇಂದ್ರದಿಂದ ಸುರತ್ಕಲ್ ಟೋಲ್ ಕೇಂದ್ರದವರೆಗೂ ಪಾದಯಾತ್ರೆ ನಡೆಸಲಾಗುವುದು ಎಂದರು.
ಹಿಂದೆ, ಹೆಜಮಾಡಿ ಸುಂಕ ವಸೂಲಾತಿ ಕೇಂದ್ರ ಆರಂಭವಾಗುವವರೆಗೂ ತಾತ್ಕಾಲಿಕ ನೆಲೆಯಲ್ಲಿ ಸುರತ್ಕಲ್ ಟೋಲ್ ಕೇಂದ್ರವನ್ನು ತೆರೆಯಲಾಗಿತ್ತು. ಹೆಜಮಾಡಿ ಟೋಲ್ ಕಾರ್ಯಾರಂಭ ಮಾಡಿದರೂ ಸುರತ್ಕಲ್ ಕೇಂದ್ರವನ್ನು ಮುಚ್ಚಲಾಗಿಲ್ಲ. ಇಂದಿಗೂ ವಾಹನ ಸವಾರರಿಂದ ಸುಂಕ ವಸೂಲಾತಿ ಮಾಡಲಾಗುತ್ತಿದೆ. ಕೇವಲ 9 ಕಿ.ಮೀ ಅಂತರದಲ್ಲಿ ಎರಡೆರಡು ಟೋಲ್ ಕೇಂದ್ರಗಳಿರುವುದು ವಾಹನ ಸವಾರರಿಗೆ ಆರ್ಥಿಕ ಹೊರೆ ಬಿದ್ದಿದೆ ಎಂದರು.
2018ರಲ್ಲಿ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರ ಸಭೆ ನಡೆಸಿ ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಕೇಂದ್ರಗಳನ್ನು ವಿಲೀನಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ನಿರ್ಣಯ ಮಾತ್ರ ಅನುಷ್ಠಾನಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕೋಟ್ಯಾನ್, ಬಾಲಕೃಷ್ಣ ಶೆಟ್ಟಿ, ಅಬ್ದುಲ್ ಅಜೀಜ್ ಇದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ