Slider

ಹಿಜಾಬ್ ಇಸ್ಲಾಂ‌ನ ಅತ್ಯಗತ್ಯ ಭಾಗವಲ್ಲ:-ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಮಹತ್ವದ ಆದೇಶ.15-3-2022

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಇಂದು ಮಹತ್ವದ ತೀರ್ಪು ನೀಡಿದೆ. ವಿಚಾರಣೆ ಮುಗಿದ 18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವರಿ 25ರಂದು ವಿಚಾರಣೆ ಅಂತ್ಯಗೊಳಿಸಿತ್ತು.

ಹಿಜಾಬ್‌ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್‌ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo