ಹಿಜಾಬ್ ಪರ ಹೋರಾಟಗಾರ್ತಿ ಆಲಿಯಾ ಅಸಾದಿ ಮಾತನಾಡಿ, ನಮಗೆ ಕೋರ್ಟ್ನಲ್ಲಿ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ನಮ್ಮ ವಿರುದ್ಧ ತೀರ್ಪು ಬಂದಿದೆ. ಆದರೆ ನಾವು ಯಾವುದೇ ಕಾರಣಕ್ಕೂ ಹಿಜಾಬ್ ಇಲ್ಲದೆ ಕಾಲೇಜಿಗೆ ಬರಲ್ಲ. ಹೆಣ್ಣುಮುಕ್ಕಳು ಮನೆಯಿಂದ ಹೊರಬರುವಾಗ ತಲೆ-ಎದೆಭಾಗವನ್ನು ಮುಚ್ಚಬೇಕು ಎಂದು ಕುರಾನ್ನಲ್ಲಿ ಬರೆದಿದೆ. ಕುರಾನ್ ಹೇಳಿದ ಮೇಲೆ ನಮಗೆ ಅದೇ ಫೈನಲ್, ಅದೇ ನಮ್ಮ ಸಂವಿಧಾನ. ನಮ್ಮ ಹಕ್ಕು ಪಡೆಯೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ. ನಮಗೆ ಹಿಜಾಬ್ ಅತ್ಯವಶ್ಯಕ. ಅದಕ್ಕಾಗಿಯೇ ಈ ಹೋರಾಟ. ರಾಜಕೀಯ ಉದ್ದೇಶಕ್ಕಾಗಿ ಇದನ್ನು ದೊಡ್ಡದು ಮಾಡಲಾಯಿತು. ಕಾಲೇಜಿನ ಕಾಂಪೌಂಡಿನ ಒಳಗೇ ಈ ಸಮಸ್ಯೆಯನ್ನ ಬಗೆಹರಿಸಬಹುದಿತ್ತು ಎಂದರು.
ಕಾಲೇಜಿಗೆ ಗೈರಾಗಿದ್ದರೂ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೇವೆ. ನಾವು ಹಿಜಾಬ್ ತೆಗೆಯುವುದಿಲ್ಲ, ನಮಗೆ ಶಿಕ್ಷಣ ಕೂಡ ಮುಖ್ಯ. ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ. ಒತ್ತಡ ಇದ್ದದ್ದಕ್ಕೆ ಇಂದು ಹಿಜಾಬ್ ವಿರುದ್ಧ ತೀರ್ಪು ಬಂದಿದೆ. ಇದು ಅಸಂವಿಧಾನಿಕವಾದ ತೀರ್ಪು ಎಂದು ಆಲಿಯಾ ಅಸಾದಿ ಆರೋಪಿಸಿದರು.
ವಿದ್ಯಾರ್ಥಿನಿ ಅಲ್ಮಾಸ್ ಮಾತನಾಡಿ, ನಮಗಿಲ್ಲಿ ನ್ಯಾಯ ಇಲ್ಲ ಅನ್ನಿಸುತ್ತಿದೆ. ಎರಡು ತಿಂಗಳು ಸಮಸ್ಯೆ ಅನುಭವಿಸಿದೆವು. ನಮ್ಮನ್ನು ಬೇರೆಯೇ ರೀತಿಯಲ್ಲಿ ನೋಡುತ್ತಿದ್ದಾರೆ. ನಾವು ಡಿಸಿ, ಡಿಡಿಪಿಐ ಭೇಟಿ ಮಾಡಿದರೂ ನ್ಯಾಯ ಸಿಗಲಿಲ್ಲ. ನಮಗೆ ನಮ್ಮ ನ್ಯಾಯ ಸಿಗಲಿಲ್ಲ. ನಾವು ಜಾತ್ಯಾತೀತ ದೇಶದಲ್ಲಿದ್ದೇವೆ. ಎಲ್ಲಾ ಧರ್ಮಕ್ಕೆ ಎಲ್ಲರೂ ಗೌರವ ಕೊಡಬೇಕು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ