ಸರ್ಕಾರ ಹೊರಡಿಸಿದ ವಸ್ತ್ರಸಂಹಿತೆ ಆದೇಶವನ್ನು ಪ್ರಶ್ನಿಸುವಂತಿಲ್ಲ. ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರ್ಕಾರ ಆದೇಶ ಕಾನೂನು ಬದ್ದವಾಗಿದೆ. ಹಿಜಾಬ್ ಧರಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಜಾಗೊಳಿಸಿ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧಾರಣೆ ಕಡ್ಡಾಯ" ಎನ್ನುವ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಿದೆ. 11 ದಿನ ಸುದೀರ್ಘ ವಿಚಾರಣೆ ನಡೆಸಿದ್ದ ಪೂರ್ಣ ಪೀಠವು ಫೆಬ್ರವರಿ 25ರಂದು ತೀರ್ಪು ಕಾಯ್ದಿರಿಸಿತ್ತು. ಸರಿ ಸುಮಾರು 23.5 ತಾಸು ವಿಚಾರಣೆ ಆಲಿಸಿರುವ ಪೀಠವು 17 ದಿನಗಳ ಬಳಿಕ ತೀರ್ಪು ಪ್ರಕಟಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ