Slider

"ಸತ್ಯ‌ಮೇವ ಜಯತೇ" ಹೈಕೋರ್ಟ್‌ನ ತೀರ್ಪಿನಿಂದ ಭಾರತದ ಸಂಸ್ಕೃತಿಗೆ ಜಯವಾಗಿದೆ:-ಶಾಸಕ ರಘುಪತಿ ಭಟ್ ಹೇಳಿಕೆ 15-3-2022

ಕೋರ್ಟ್‌ಗೆ ಹೋದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸತ್ಯ‌ಮೇವ ಜಯತೇ' ಉಚ್ಛ ನ್ಯಾಯಾಲಯದ‌ ತೀರ್ಪಿನ ಮೂಲಕ ಭಾರತದ ಸಂಸ್ಕೃತಿಗೆ ಜಯವಾಗಿದೆ, ಈ ಮಣ್ಣಿನ ವಿರೋಧಿಗಳು ಸೋಲು ಕಂಡಿದ್ದಾರೆ. ಸಮವಸ್ತ್ರದ ಕುರಿತು ಕರ್ನಾಟಕ ಹೈಕೋರ್ಟ್‌ ಹೊರಡಿಸಿದ ತೀರ್ಪನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ. ಇದು ನಮ್ಮ ಸಂವಿಧಾನಕ್ಕೆ ಲಭಿಸಿದ ಜಯ. ಮತಾಂಧತೆ ಕೊನೆಯಾಗಲಿ, ಕಾನೂನಿನ ಪಾಲನೆಯಾಗಲಿ ಎಂದಿದ್ದಾರೆ.

ಇನ್ನು ಕೆಲವರು ಸಂವಿಧಾನ ಬದ್ದವಾದ ನಿಯಮವನ್ನೇ ಧಿಕ್ಕರಿಸಲು ಹೊರಟ್ಟಿದ್ದರು. ಅವರಿಗೆ ನ್ಯಾಯಾಲಯವೇ ತಕ್ಕ ಉತ್ತರ ನೀಡಿದೆ. ಮತಾಂಧತೆ ಕೊನೆಯಾಗಲಿ, ಕಾನೂನಿನ ಪಾಲನೆಯಾಗಲಿ ಎಂದು ಹೇಳಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo