58 ವರ್ಷದ ಗಣೇಶ್ ಪೈ ಮತ್ತು ಅವರ ಮಗಳು ಗಾಯತ್ರಿ ಪೈ ಮೃತ ದುರ್ದೈವಿಗಳಾಗಿದ್ದಾರೆ. ಇವರನ್ನು ಗರಡಿಮಜಲು ನಿವಾಸಿಗಳೆಂದು ಗುರುತಿಸಲಾಗಿದೆ.
ಗಣೇಶ್ ಅವರು ಹುಬ್ಬಳ್ಳಿಯಿಂದ ಆಗಮಿಸುತ್ತಿದ್ದ ಮಗಳನ್ನ ಮನೆಗೆ ಕರೆದುಕೊಂಡು ಹೋಗುವಾಗ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಗಾಯತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ತೀವ್ರ ರಕ್ತಸ್ರಾವದಿಂದ ಅಸ್ವಸ್ತಗೊಂಡಿದ್ದ ಗಣೇಶ್ ಪೈ ಕೂಡ ದಾರಿ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ