Slider

ಉಡುಪಿ:-ಹಿಜಾಬ್ ವಿವಾದ ಹಿನ್ನೆಲೆ ಜಿಲ್ಲೆಯಾದ್ಯಂತ ಮಾರ್ಚ್ 21ರವರೆಗೆ ನಿಷೇಧಾಜ್ಞೆ ಜಾರಿ 15-3-2022

ಉಡುಪಿ : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ವಿವಾದದದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಮಾರ್ಚ್ 21 ರ ಸಂಜೆ 6:00 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ, ಕಾಲೇಜು ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ನಿಯಮವನ್ನು ಜಾರಿಗೆ ತರಲಾಗಿದೆ.

1. ಶಾಲ, ಕಾಲೇಜಿನ ಸುತ್ತ ಮುತ್ತ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ.,
 
2. ಸಮವಸ್ತ್ರ ವಿವಾದದ ಕುರಿತು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಬ್ಯಾನರ್ ಅಳವಡಿಸುವುದು, ಸಭೆ ಹಾಗೂ ಸಮಾರಂಭಗಳನ್ನು ನಡೆಸುವಂತಿಲ್ಲ. 

3. ಪಟಾಕಿಗಳನ್ನು ಸಿಡಿಸುವುದು, ದೈಹಿಕ ಹಿಂಸೆಯನ್ನುoಟು ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. 

4. ಶಾಲಾ, ಕಾಲೇಜುಗಳ ಆವರಣದಲ್ಲಿ ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಯಾವುದೇ ಅಪರಿಚಿತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ಪ್ರಸ್ತುತ ಪಡಿಸಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo