Slider

ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಉಚಿತ ಪ್ರಯಾಣದ ವ್ಯವಸ್ಥೆ21-3-2022

ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಉಚಿತ ಪ್ರಯಾಣದ ವ್ಯವಸ್ಥೆ

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್‌ 28ರಿಂದ ಏಪ್ರಿಲ್‌ 11ರ ವರೆಗೆ ನಡೆಯುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಸಂಸ್ಥೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 28-03-2022 ರಿಂದ 11-04-2022ರ ವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo