Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ ಇಬ್ಬರು ಸಜೀವ ದಹನ21-3-2022

ಮಲ್ಲಾರು ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು  ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಅಂಗಡಿಯ ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo