ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿದ್ದು, ಏಪ್ರಿಲ್ ಮೊದಲ ವಾರ ಸಂಪುಟಕ್ಕೆ ಸರ್ಜರಿಯಾಗಲಿದೆ.
ಚುನಾವಣೆ ಉದ್ದೇಶದೊಂದಿಗೆ ಸಂಪುಟ ರಚನೆಯಾಗಲಿದ್ದು, ಹಳಬರಿಗೆ ಪಕ್ಷದ ಕೆಲಸ ನೀಡಲಾಗುತ್ತದೆ. ಪಂಚರಾಜ್ಯಗಳ ಚುನಾವಣೆ ಯಲ್ಲಿ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ಹೊಸಬರಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದೆ.
ಪಕ್ಷದ ಸಂಘಟನಾತ್ಮಕ ಚಟುವಟಿಕೆಯನ್ನು ಚುರುಕುಗೊಳಿಸುವ ಉದ್ದೇಶ ಹಾಗೂ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುವುದು. ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಉಳಿದಿದ್ದು, 8 ಸಚಿವರನ್ನು ಸಂಪುಟದಿಂದ ಕೈಬಿಟ್ಟು 12 ಮಂದಿಯನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ