ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಮಾಣ ನಿಲ್ದಾ ಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಯುತ್ತಿದ್ದು, ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಿಲ್ದಾಣದಲ್ಲಿರುವ ಜನ ಸೇರಿ ಸಿಬ್ಬಂದಿಗಳು ಆತಂಕದಲ್ಲಿದ್ದು, ತಪಾಸಣೆ ಕಾರ್ಯಾಚರಣೆ ಮುಂದುವರೆದಿದೆ. ವಿಮಾನವನ್ನ ರನ್ ವೇ ಬಳಿಯೇ ನಿಲ್ಲಿಸಿ, ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಭದ್ರತಾ ಪಡೆಗಳು ಮತ್ತು ಶ್ವಾನದಳದಿಂದ ತೀವ್ರ ತಪಾಸಣಾ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ