ಮುಂಬೈ:-ಪಂಚರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲಾಗಿದೆ. ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಿವೆ.
ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ದರ 96.21ರೂಪಾಯಿ ಆಗಿದೆ. ಡೀಸೆಲ್ ಲೀಟರ್ ದರ 87. 47 ರೂಪಾಯಿ ಆಗಿದೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದುಬಾರಿಯಾಗಿದೆ. ಒಂದು ಲೀಟರ್ ಪೆಟ್ರೋಲ್ ದರ 110. 82 ರೂಪಾಯಿ. ಡೀಸೆಲ್ ಲೀಟರ್ ದರ 95.00 ರೂಪಾಯಿ ಆಗಿದೆ. ಇಂದಿನ ದರ ಹೆಚ್ಚಳ ಆರಂಭವಾಗಿದ್ದು ಮುಂದಿನ ಚುನಾವಣೆ ತನಕ ಪ್ರತಿ ದಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ