ಬೆಂಗಳೂರು ; ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಪರೀಕ್ಷೆ ಬಹಿಷ್ಕಾರ ಮಾಡಿದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪಿನ ನಂತರ ರಾಜ್ಯದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದು, ಅಂತಹ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮರು ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಪರೀಕ್ಷೆಗಳಿಗೆ ಗೈರು ಹಾಜರಾದವರಿಗೆ ಮರು ಪರೀಕ್ಷೆ ನಡೆಸುವ ಯಾವುದೇ ವ್ಯವಸ್ಥೆ ಇಲ್ಲ. ಪರೀಕ್ಷೆಗಳಲ್ಲಿ ಫೇಲ್ ಆದವರಿಗೆ ಮಾತ್ರ ಪೂರಕ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪರೀಕ್ಷೆ ನಡೆಯುತ್ತಿರು ಸಂದರ್ಭದಲ್ಲಿ ಗೈರು ಹಾಜರಾದವರಿಗೆ ಯಾವುದೇ ಕಾರಣಕ್ಕೂ ಮರು ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ