Slider


ಬ್ರಹ್ಮಾವರ:-ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಪ್ರಯಾಣಿಕರು ಪಾರು 22-3-2022

ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಉಪ್ಪೂರು ಕೆ.ಜಿ. ರೋಡ್ ಬಳಿ ನಡೆದಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಟುಂಬಸ್ಥರು ಕುಂದಾಪುರದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಉಡುಪಿಗೆ ವಾಪಾಸು ಬರುತ್ತಿದ್ದರು. ಈ ವೇಳೆ ಉಪ್ಪೂರು ಕೆ.ಜಿ.ರೋಡ್ ಬಳಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಿಂದ ಕೆಳಗೆ ಬಿದ್ದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo