ಬೆಂಗಳೂರು :ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.310 ಪ್ರಾಂಶುಪಾಲರ ಹುದ್ದೆಗಳನ್ನು ಯುಜಿಸಿ ನಿಯಮದ ಪ್ರಕಾರ ನೇರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ಒಟ್ಟು ಹುದ್ದೆಗಳ ಪೈಕಿ 45 ಹುದ್ದೆಗಳನ್ನು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಉಳಿದ 265 ಹುದ್ದೆಗಳ ಪೈಕಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 132, ಪರಿಶಿಷ್ಟ ಜಾತಿಗೆ 40, ಪರಿಶಿಷ್ಟ ಪಂಗಡಕ್ಕೆ 8, ಪ್ರವರ್ಗ-1 ಕ್ಕೆ11 ಹುದ್ದೆಗಳು, 2ಎಗೆ 40, 2ಬಿಗೆ 11,3ಎಗೆ 10, 3 ಬಿಗೆ 13 ಹುದ್ದೆಗಳನ್ನು ಮೀಸಲಿಡಲಾಗಿದೆ. ತೃತೀಯ ಲಿಂಗಿಗಳಿಗೆ ಒಟ್ಟು 4 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ