ಹೌದು.. ಸಂತೋಷ್ ಶೆಟ್ಟಿ ಅವರು ಇಂದು(ಶನಿವಾರ) ಮಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ 24 ವರ್ಷದಿಂದ ಖಾದರ್ ಜೊತೆಗಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಏಕಾಏಕಿ ಬಿಜೆಪಿ ಸೇರಿರುವುದು ಖಾದರ್‌ಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಯು.ಟಿ.ಖಾದರ್ ವಿರುದ್ದ ಆಕ್ರೋಶ ಹೊರಹಾಕಿರುವ ಸಂತೋಷ್ ಶೆಟ್ಟಿ, ಯು.ಟಿ. ಖಾದರ್ ಓರ್ವ ಅತ್ಯಂತ ಭ್ರಷ್ಟ ರಾಜಕಾರಣಿ. ಅವರ ನಡವಳಿಕೆಯಿಂದ ನಾವು ಬೇಸತ್ತಿದ್ದೇವೆ. ಈ ಕಾರಣದಿಂದಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.
ಉಳ್ಳಾಲ ತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ. ಅಲ್ಪ ಸ್ವಲ್ಪ ಅನುದಾನದ ಕಾಮಗಾರಿ ಮಾಡಿ ಫೋಸ್ ನೀಡಿದ್ದಾರೆ ಅವರಿಗೆ ದೇಶದಾದ್ಯಂತ ಮನೆಯಿದೆ, ಆದರೆ ಬಡವರಿಗೆ ಮನೆಯಿಲ್ಲ. ಅಬ್ಬಕ್ಕ ನಾಡು ಎಂದು ಹೇಳುವ ಇವರು ಮಹಿಳಾ ಕಾಲೇಜು ಮಾಡಿಲ್ಲ. ಮದುವೆ ಮುಂಜಿ, ಮಕ್ಕಳ ತೊಟ್ಟಿಲು ಹಾಕುವ ಕಾರ್ಯದಲ್ಲಿ ಭಾಗಿಯಾಗುವುದು ಬಿಟ್ಟು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ