ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದೂ ಕೂಡ ಮಳೆ ಮುಂದುವರೆಯಲಿದ್ದು, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರಿನಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ