Slider

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ:- ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ 24-3-2022

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲವೆಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿದ್ದು, ಅದನ್ನು ಮರೆಮಾಚುವ ಉದ್ದೇಶದಿಂದ ತಾಂತ್ರಿಕ ತೊಂದರೆ ನೆಪದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಲಿದ್ದು, ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ವಿದ್ಯುತ್ ಉತ್ಪಾದನೆಯಲ್ಲಿ ಕೊರತೆ ಉಂಟಾಗಿಲ್ಲ. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.

ಆರಂಭದಲ್ಲಿ ವಿದ್ಯುತ್ ಕೊರತೆ ಉಂಟಾಗಿದ್ದು, ತಕ್ಷಣವೇ ಕೇಂದ್ರ ಸಚಿವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಮಾತನಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮ ಕೈಗೊಂಡ ನಂತರ ಕಲ್ಲಿದ್ದಲು ಕೊರತೆ ನಿವಾರಣೆಯಾಗಿದೆ. ರೈತರಿಗೆ 7 ತಾಸು ವಿದ್ಯುತ್ ನೀಡಲು ತಾಂತ್ರಿಕ ಸಮಸ್ಯೆ ಇದ್ದರೆ ಬಗೆಹರಿಸುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕೊರತೆಯಾಗಿಲ್ಲ. ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲವೆಂದು ಹೇಳಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo