ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂಬುದಾಗಿ ತೀರ್ಪು ನೀಡಿದ್ದಂತ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಂತ ಪ್ರಕರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಪೊಲೀಸರು, ತಮಿಳುನಾಡಿನ ತಾಂಜಾವೂರಿನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ತೀರ್ಪು ನೀಡಿದ್ದ ಜಡ್ಜ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಎರಡನೇ ಆರೋಪಿಯನ್ನ ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ ಎಂದರು.
ಬಂಧಿತ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇದರಿಂದ ತನಿಖೆ ಗೆ ಸಹಕಾರಿಯಾಗಲಿದೆ. ಪ್ರಕರಣದ ಹಿಂದೆ ಯಾವ ಸಂಘಟನೆಗಳು ಇವೆ ಎನ್ನುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ಒಟ್ಟಾರೆ ಇಬ್ಬರು ಆರೋಪಿಗಳ ಬಂಧನವಾಗಿದೆ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವಂತ ಯೋಗಿ ಅಧಿತ್ಯನಾಥ್ ಅವರಿಗೆ ಶುಭಾಷಯವನ್ನು ಕೋರಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ