ಎಸ್ ಡಿಪಿಐ ಉಡುಪಿ ಜಿಲ್ಲಾ ಅಧ್ಯಕ್ಷ ನಝೀರ್ ಅಂಬಾಗಿಲು ಮಾಲಕತ್ವದ ಈ ಕಟ್ಟಡದಲ್ಲಿ 2 ಹೋಟೆಲ್ ಗಳಿದ್ದು ಈ ಕಟ್ಟಡ ಯಾವುದೇ ಡೋರ್ ನಂಬರ್ ಗಳಿಲ್ಲದೆ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು.
ಈ ಕಟ್ಟಡವನ್ನು ತೆರವುಗೊಳಿಸಲು ನಗರಸಭೆಯು ಹೊಟೇಲ್ ಮಾಲಕರಿಗೆ ನೋಟಿಸ್ ಜಾರಿ ಮಾಡಿತ್ತು ಇದರ ವಿರುದ್ಧ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು. ಬಳಿಕ ನಗರಸಭೆಯು ಆ ತಡೆಯಾಜ್ಞೆಯನ್ನು ಹೈಕೋರ್ಟ್ ನಿಂದ ತೆರವುಗೊಳಿಸುವಲ್ಲಿ ಯಶಸ್ವಿಯಾಗಿತ್ತು.
ಕಳೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಮಾಲಕರು ನಿನ್ನೆ ರಾತ್ರಿಯೇ ಅಂಗಡಿ ಹೋಟೆಲ್ ಗಳ ಸಾಮಗ್ರಿಗಳನ್ನು ತೆರವುಗೊಳಿಸಿದ್ದರು.
ಇಂದು ಬೆಳಗ್ಗೆ ಆಗಮಿಸಿದ ಅಧಿಕಾರಿಗಳ ತಂಡ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ನಡೆಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ