ದೇಶದಲ್ಲಿ ನಕಲಿ ಮತದಾನ ತಪ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಚಿಂತನೆ ನಡೆಸಿದ್ದು, ನಕಲಿ ಮತದಾನ ತಪ್ಪಿಸಲು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಚುನಾವಣಾ ಅಕ್ರಮ ತಡೆಯಲು ಕೇಂದ್ರ ಸರ್ಕಾರ ಕಾನೂನು ಸಚಿವರ ಮಟ್ಟದಲ್ಲಿ ಚಿಂತನೆ ನಡೆಸುತ್ತಿದೆ. ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವುದು ಒಂದು ಆಯ್ಕೆ. ಸದ್ಯ ವೋಟರ್ ಐಡಿಗೆ ಆಧಾರ್ ಜೋಡಿಸುವುದು ಸ್ವಯಂಪ್ರೇರಿತವಾಗಿದೆ ಎಂದು ಹೇಳಿದ್ದಾರೆ.
ಒಂದು ದೇಶ, ಒಂದು ಮತದಾರರ ಗುರುತಿನ ಚೀಟಿ ಎಂಬುದು ನಮ್ಮ ಗುರಿಯಾಗಿದೆ. ಹೀಗೆ ಮಾಡುವುದರಿಂದ ಮತದಾರರ ಪಟ್ಟಿಯಲ್ಲಿ ಎರಡು ಮುರು ಕಡೆ ಹೆಸರು ಹೊಂದಿ ನಕಲಿ ಮತದಾನ ಮಾಡುವುದನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ