ಇನ್ನು ಘಟನೆಗೆ ಸಂಬಂಧಿಸಿದಂತೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರನ್ನು ಕೆಲ ವಿದ್ಯಾರ್ಥಿಗಳು ಆಕ್ಷೇಪಿಸಿದ್ದಾರೆ. ವಿದ್ಯಾರ್ಥಿಗಳ ಆಕ್ಷೇಪದ ಹಿನ್ನೆಲೆ ಪ್ರಾಂಶುಪಾಲರು ತರಗತಿಗೆ ಹಾಜರಾಗಲು ನಿರಾಕರಿಸಿದ್ದಾರೆ.
ಹೀಗಾಗಿ ವಿದ್ಯಾರ್ಥಿಗಳು ಮತ್ತು ಹಿಜಾಬ್ ವಿದ್ಯಾರ್ಥಿನಿಯರ ನಡುವೆ ಮಾತಿನ ಚಕಮಕಿ ನಡೆದು ಕಾಲೇಜು ಗೇಟಿನ ಮುಂಭಾಗದಲ್ಲೇ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.
ಇನ್ನು ಈ ಕುರಿತು ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ