Slider

ಮಂಗಳೂರಿನಲ್ಲಿ ಮುಂದುವರಿದ ಹಿಜಾಬ್ ವಿವಾದ:-ಎಬಿವಿಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ6-3-3022

ಹಿಜಾಬ್ ವಿಚಾರದಲ್ಲಿ ಸಂಘರ್ಷಕ್ಕಿಳಿದ ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿ ಸಾಯಿ ಸಂದೇಶ್​ಗೆ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗಿದೆ. ಈತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯಲ್ಲಿ ಸಕ್ರಿಯನಾಗಿದ್ದವನು ಎಂದು ಹೇಳಲಾಗಿದೆ.

ಇನ್​ಸ್ಟಾಗ್ರಾಮ್ ಮತ್ತು ವಾಟ್ಸ್ಯಾಪ್ ಮೂಲಕ ಹತ್ತಾರು ಬೆದರಿಕೆ ಕರೆಗಳು ಬಂದಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಹಿಜಾಬ್ ವಿಚಾರವಾಗಿ ಕಳೆದ ಶುಕ್ರವಾರ (ಮಾರ್ಚ್ 4) ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಪರೀಕ್ಷೆಗೆ ಹಾಜರಾಗಲು ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಸಾಯಿ ಸಂದೇಶ್ ಮತ್ತು ಕೆಲ ವಿದ್ಯಾರ್ಥಿಗಳು ಪ್ರಶ್ನಿಸಿದ್ದರು. ಈ ವೇಳೆ ಸಾಯಿ ಸಂದೇಶ್​ಗೆ 'ಕಾಲೇಜ್ ನಿನ್ನ ಅಪ್ಪಂದಾ' ಎಂದು ವಿದ್ಯಾರ್ಥಿನಿ ಕೇಳಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಬಿವಿಪಿ ಕಾರ್ಯಕರ್ತನೂ ಆಗಿರುವ ವಿದ್ಯಾರ್ಥಿ ಸಾಯಿ ಸಂದೇಶ್​ಗೆ ಕೊಲೆ ಬೆದರಿಕೆ ಬಂದಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo