ಹೊಸದಿಲ್ಲಿ: ಶುಕ್ರವಾರ ರಾತ್ರಿ ದಿಲ್ಲಿಯ ಗೋಕಲ್ ಪುರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಮತ್ತು 60 ಗುಡಿಸಲುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ದಳ ಇಲಾಖೆ ತಿಳಿಸಿದೆ.
"ರಾತ್ರಿ 1 ಗಂಟೆಗೆ ಗೋಕಲ್ ಪುರಿ ಪಿಎಸ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣವೇ ತಂಡಗಳು ಎಲ್ಲಾ ರಕ್ಷಣಾ ಸಾಧನಗಳೊಂದಿಗೆ ಸ್ಥಳಕ್ಕೆ ತಲುಪಿದವು. ನಾವು ಅಗ್ನಿಶಾಮಕ ಇಲಾಖೆಯನ್ನು ಕೂಡ ಸಂಪರ್ಕಿಸಿದ್ದೇವೆ, ಅವರು ಉತ್ತಮವಾಗಿ ಸ್ಪಂದಿಸಿದರು" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ