Slider

ಮಂಗಳೂರು:-ಹಿಜಾಬ್ ಸಂಘರ್ಷ ಪ್ರಕರಣ ಹಲವು ವಿದ್ಯಾರ್ಥಿಗಳ ವಿರುದ್ಧ FIR ದಾಖಲು 7-3-2022

ಮಂಗಳೂರು: ಹಿಜಾಬ್‌ ವಿಚಾರವಾಗಿ ಸಂಘರ್ಷ ನಡೆದ ಹಿನ್ನಲೆಯಲ್ಲಿ ಮಂಗಳೂರಿನ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ, ಸೇರಿ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಬಂದರು ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾರ್ಚ್.4 ರಂದು ಹಿಜಾಬ್‌ ಧರಿಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರು ಹಾಗೂ ಕೆಲ ವಿದ್ಯಾರ್ಥಿಗಳ ನಡುವೆ ಪರಸ್ಪರ ಸಂಘರ್ಷ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಮಾ.5ರಂದು ಕಾಲೇಜಿಗೆ ರಜೆ ಘೋಷಿಸಿ, ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo