Slider

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ:-ಪ್ರಕರಣವನ್ನು NIA ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ 23-3-2022

ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್‌ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ ಪಕ್ಷದ  ನಾಯಕರು ಒತ್ತಾಯಿಸಿದ್ದರು.

ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ ಮೂಲಕ ಎನ್‌ಐಎ ತನಿಖೆಗೆ ವರ್ಗಾಹಿಸಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo