ಎಸ್‌ಎಸ್‌ಎಲ್ ಸಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್ ಎಸ್‌ಎಲ್ ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕೊಠಡಿಯ ಮಾಹಿತಿಯನ್ನು ಮುಂಚಿತವಾಗಿ ಎಸ್‌ಎಂಎಸ್ (SMS) ಮೂಲಕ ತಿಳಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಗುಂಪುಗೂಡುವುದನ್ನು ತಡೆಯುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವ ಸಲುವಾಗಿ ಮುಂಚಿತವಾಗಿ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಫೋನ್ ಗಳಿಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಯಪ್ ಮೂಲಕ ಕೊಠಡಿಯ ಮಾಹಿತಿ ರವಾನೆಯಾಗಲಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈ ನಿರ್ಧಾರ ಕೈಗೊಂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ