Slider

ಮಂಗಳೂರು:-ಮಾವನ ಪಿಂಡ ಪಿಂಡ ಪ್ರದಾನಕ್ಕೆ ಬಂದ ಬಾಲಕಿಯರು ಸಮುದ್ರ ಪಾಲು 10-4-2022

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬೀಚ್‌ ನಲ್ಲಿ ಬಾಲಕಿ ಹಾಗೂ ಯುವತಿಯೊಬ್ಬಳು ಸಮುದ್ರಪಾಲಾದ ಘಟನೆ ಸುರತ್ಕಲ್ ಎನ್‌.ಐ.ಟಿ.ಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಾವನ್ನಪ್ಪಿದವರು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ.

ಇವರು ಇತ್ತೀಚೆಗೆ ಮೃತಪಟ್ಟ ತಮ್ಮ ಮಾವನ ತಿಥಿಯ ಪಿಂಡ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಇಂದು ಬೆಳಗ್ಗೆ ಕುಟುಂಬಸ್ಥರ ಜೊತೆಗೆ ಎನ್‌ಐಟಿಕೆ ಬೀಚ್ ಗೆ ಆಗಮಿಸಿದ್ದರು.

 ಇದೇ ಸಂಧರ್ಭ ವೆಂಕಟೇಶ್ ಎಂಬವರು ವೈಷ್ಣವಿ ಮತ್ತು ತ್ರಿಶಾ ಜೊತೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ್ ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ವೈಷ್ಣವಿ ಮತ್ತು ತ್ರಿಶಾ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo