ಹಲವು ಕಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.ಪಡುಬಿದ್ರಿ, ಶಿರ್ವ, ಉಚ್ಚಿಲ, ಕಾಪು, ಕಟಪಾಡಿ, ಉಡುಪಿ, ಮಣಿಪಾಲ ಪರಿಸರದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಒಂದೆರಡು ದಿನ ಗುಡುಗು ಸಹಿತ ಉತ್ತಮ ಮಳೆ ಬರುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ,ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರು ನಗರದಲ್ಲೂ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಬಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದ್ದು,ಈ ವೇಳೆ ವಾಹನ ಸಂಚಾರ ಕಡಿಮೆ ಇದ್ದಿದ್ದರಿಂದ ಅಪಾಯ ತಪ್ಪಿದೆ.
ಜಾತ್ರೋತ್ಸವಕ್ಕೂ ಅಡ್ಡಿಯಾದ ಮಳೆ
ಪುತ್ತೂರು ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೂ ಮಳೆ ಅಡ್ಡಿಯಾಗಿದೆ. ದೇವಳದ ಎದುರು ಭಾಗದ ಗದ್ದೆಯಲ್ಲಿ ಜಾತ್ರೆಯ ಪ್ರಯುಕ್ತ ಹಾಕಲಾಗಿದ್ದ ತಗಡಿನ ಅಂಗಡಿಗಳಿಗೆ ಭಾರೀ ಗಾಳಿ ಮಳೆಯ ಹಿನ್ನಲೆಯಲ್ಲಿ ಹಾನಿಯಾಗಿದೆ. ಭಾರೀ ಗಾಳಿಗೆ ತಗಡು ಶೀಟ್ ಗಳು ಹಾರಿ ಹೋಗಿದ್ದು ವ್ಯಾಪಾರಿಗಳಿಗೆ ಅಪಾರ ನಷ್ಟವಾಗಿದೆ. ಗಾಳಿಯ ರಭಸಕ್ಕೆ ಹಲವು ಆಹಾರ ಸಾಮಾಗ್ರಿಗಳು ನೀರಿಗೆ ತೋಯ್ದಿವೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ