ಪ್ರಮೋದ್ ಮುತಾಲಿಕ್ ಅವರು ಉಡುಪಿ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಪ್ರಮೋದ್ ಮುತಾಲಿಕ್ ಅವರು ಉಡುಪಿಯ ಗಂಗೊಳ್ಳಿಯಲ್ಲಿ ನಡೆದ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆಯಲ್ಲಿ ಪ್ರಮೋದ್ ಮುತಾಲಿಕ್ ಅವರು ಭಾಗವಹಿಸಬೇಕಿತ್ತು.
ಆದರೆ ಗಂಗೊಳ್ಳಿ ಕೋಮು ಸೂಕ್ಷ್ಮ ಪ್ರದೇಶ ಎಂಬ ಕಾರಣಕ್ಕೆ ಮುತಾಲಿಕ್ ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಸ್ಥಳೀಯ ಬಿಜೆಪಿ ಶಾಸಕರು ಗೃಹ ಸಚಿವರನ್ನು ಸಂಪರ್ಕಿಸಿದರೂ ಮುತಾಲಿಕ್ ಪ್ರವೇಶಕ್ಕೆ ಅವಕಾಶ ಸಿಕ್ಕಿರಲಿಲ್ಲ.
ಸಭೆಗೂ ಮುನ್ನ ನಡೆದ ಶೋಭಾಯಾತ್ರೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದು, ಮುತಾಲಿಕ್ ಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ