ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಪ್ರೀತಿಸಿದ ಪ್ರೇಯಸಿಯೊಬ್ಬಳು ಪೊಲೀಸರಿಗೆ ದೂರು ಕೊಟ್ಟಳು ಎಂಬ ಕಾರಣಕ್ಕೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಅಡ್ಯಾರ್ ಬಳಿ ಇಂದು ಸಂಭವಿಸಿದೆ.
ಇನ್ನು ಆತ್ಮಹತ್ಯೆಗೆ ಯತ್ನಿಸಿದ ಯುವಕ ಸ್ಥಳೀಯ ನಿವಾಸಿ ಅಡ್ಯಾರ್ ನಲ್ಲಿಯೇ ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಈತ ಪರಂಗಿಪೇಟೆಯ ಮಾರಿಪಳ್ಳದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ. ಆದರೆ ಆಕೆ ಈತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಳು. ಇದರಿಂದ ಮನನೊಂದು ಈತ ಟವರ್ ಹತ್ತಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನನ್ನು ಕೆಳಗಿಳಿಸಲು ಹರಸಾಹಸಪಟ್ಟಿದ್ದಾರೆ. ಆದರೆ ಆತ ಕೇಳಲಿಲ್ಲ ಎನ್ನಲಾಗಿದೆ.
ನಂತರ ಆ ಯುವತಿ ಬಂದು ದೂರು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದ್ದು ಬಳಿಕ ಟವರ್ ನಿಂದ ಕೆಳಗೆ ಇಳಿದಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಪೊಲೀಸರು ಘಟನೆ ಸ್ಥಳಕ್ಕೆ ಬಂದು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ