ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಬೀಚಿನ ಸೈಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ನೀರಿನಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರಲ್ಲಿ ಒಬ್ಬನ ಶವ ಪತ್ತೆಯಾಗಿದೆ. ಮತ್ತೊಬ್ಬನ ಶವ ಪತ್ತೆಯಾಗಿಲ್ಲ ಎಂದು ತಿಳಿಯಲಾಗಿದೆ.
ಮೃತ ವಿದ್ಯಾರ್ಥಿಗಳನ್ನು ಬೆಂಗಳೂರಿನ ಜಿ.ಕೆ.ವಿ.ಕೆ ಕೃಷಿ ಕಾಲೇಜಿನ ಬಾಗಲಕೋಟೆ ಮೂಲದ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್.ಎಂ.ನಂದಿಹಳ್ಳಿ (21) ಎಂದು ತಿಳಿದು ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರಿನ ಜಿ.ಕೆ.ವಿ.ಕೆ ಕೃಷಿ ಕಾಲೇಜಿನ ಸುಮಾರು 68 ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಬಂದಿದ್ದು ಲೈಫ್ ಗಾರ್ಡ್ ಗಳ ಸೂಚನೆಯನ್ನು ಧಿಕ್ಕರಿಸಿ ಸೆಲ್ಫಿ ತೆಗೆಯಲು ತೆರಳಿದ್ದು ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ಒಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು ಇನ್ನೋರ್ವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಸೈಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಅಪಘಾತ ವಲಯ ಎಂದು ಬೋರ್ಡ್ ಹಾಕಿದರು ಅದನ್ನು ಲೆಕ್ಕಿಸದೆ ಪ್ರಯಾಣಿಕರು ನೀರಿಗೆ ಇಳಿದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ