Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ:-ಅಮಿತ್ ಶಾ ಸ್ಪಷ್ಟನೆ 2-4-2022

ಬೆಂಗಳೂರು: ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಅವರು, ಈ ಕುರಿತು ಸ್ಪಷ್ಟನೆ ನೀಡಿದ್ದು, ಬೇರೆ ಪಕ್ಷಗಳೊಂದಿಗೆ ಚುನಾವಣಾಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲವೆಂದು ಹೇಳಿದ್ದಾರೆ.

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಮಾತು ಕೇಳಿಬರುತ್ತಿದೆಯಲ್ಲ ಎಂದು ಕೋರ್ ಕಮಿಟಿಯ ಸದಸ್ಯರು ಇದು ನಿಜವೇ ಎಂದು ಕೇಳಿದ್ದರು. ಈ ವೇಳೆ ಅಮಿತ್ ಶಾ ಅವರು ಅವಧಿಗೆ ಮೊದಲು ಚುನಾವಣೆ ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆನ್ನಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo