ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.
ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.
ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ