ಉಡುಪಿ ಎಪ್ರಿಲ್ 21: ನಿಂತಿದ್ದ ಬುಲೆಟ್ ಟ್ಯಾಂಕರ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ,
ಮೃತ ಯುವಕನನ್ನು ಮಲ್ಪೆ ಬಳಿಯ ಕೊಡವೂರಿನ ಮಹೇಶ್ ಎಂದು ಗುರುತಿಸಲಾಗಿದೆ.
ಆತ ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಎಂದು ತಿಳಿದು ಬಂದಿದೆ. ಟೋಲ್ ಗೇಟ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತುರ್ತಾಗಿ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಬದುಕಿಸಲು ಸಾಧ್ಯವಾಗಲಿಲ್ಲ, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ