ಮುಲ್ಕಿ:ಕಿನ್ನಿಗೋಳಿ ಪರಿಸರದಲ್ಲಿ ಆಪತ್ಪಾಂದವನಂತೆ ಕಾರ್ಯ ನಿರ್ವಹಿಸಿ, ಬಡವರ ಕಷ್ಟಸುಖಗಳಲ್ಲಿ ಭಾಗಿಯಾಗಿ,ಉತ್ತಮ ಗಾಯಕರಾಗಿ ಜನಮನ್ನಣೆ ಗಳಿಸಿರುವ ಪ್ರಕಾಶ್ ರವರ ಸಾಮಾಜಿಕ ಚಟುವಟಿಕೆಗಳು ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ಕಿಲ್ಪಾಡಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಖ್ಯಾತ ಗಾಯಕ ಪ್ರಕಾಶ್ ಆಚಾರ್ಯ ಕಿನ್ನಿಗೋಳಿ ರವರನ್ನು ಗೌರವಿಸಿ ಮಾತನಾಡಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್,ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ,ಉದ್ಯಮಿ ಸಾಧಿಕ್ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ