ಮಂಗಳೂರು: ರಾ.ಹೆ.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಮೃತ ಸ್ಕೂಟರ್ ಸವಾರನನ್ನು ರೊನಾಲ್ಡ್ (59) ಎಂದು ಗುರುತಿಸಲಾಗಿದೆ
ಕೊಣಾಜೆಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿಯು ಸ್ಕೂಟರ್‌ನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಇದರಿಂದ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಲಾರಿಯು ಮೊದಲು ಕಾರಿಗೆ ಢಿಕ್ಕಿ ಹೊಡೆದಿದ್ದು, ಬಳಿಕ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಮಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ