ಮಂಗಳೂರು: ಮಂಗಳೂರು ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಸಿಬ್ಬಂದಿಗಳೇ ಹೊಡೆದಾಡಿಕೊಂಡ ಘಟನೆ ಸಂಚಾರ ಪಶ್ಚಿಮ ಠಾಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್‌ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್‌ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ನಡೆಸಿದ್ದಾರೆ
ಈ ವೇಳೆ ಅಲ್ಲಿದ್ದ ಉಳಿದ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಈ ಹಿಂದೆಯೂ ಈ ಕಾನ್ಸ್‌ಸ್ಟೇಬಲ್ ಮೇಲೆ ಇಂತಹ ಅನೇಕ ಆರೋಪಗಳಿದ್ದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಮುಂದಾಗುತ್ತಿಲ್ಲ ಪೊಲೀಸ್ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಮಧ್ಯೆ ಅಶಿಸ್ತು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಯಾಗುತ್ತಿದೆ. ನಗರದ ಸಂಚಾರ ಪೊಲೀಸ್ ಠಾಣೆಯೊಂದರಲ್ಲಿ ನಿನ್ನೆ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿ ಮಧ್ಯೆ ಹೊಡೆದಾಟ ನಡೆದ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ