ಉಡುಪಿ : ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ಹೊಸದಿಲ್ಲಿ, ಹರಿಯಾಣ ಹಾಗೂ ಪಕ್ಕದ ತುಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ.
ಇದರಿಂದ ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುಗಳ ಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ.
ಆದ್ದರಿಂದ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿತದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾ ಗುವುದು. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸುರಕ್ಷತಾ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ