ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡವು ದಿವ್ಯಾ ಹಾಗರಗಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ. ಪಿಎಸ್‌ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದಳು. ದಿವ್ಯಾ ಮಹಾರಾಷ್ಟ್ರ ಬಿಟ್ಟು ಬೇರೆಲ್ಲು ತೆರಳಿರಲಿಲ್ಲ. ಮಹಾರಾಷ್ಟ್ರದಲ್ಲೇ ದಿನಕ್ಕೊಂದು ಪ್ಲೇಸ್ ಬದಲಿಸ್ತಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ