Slider

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ:-ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ 8-4-2022

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ನಿಷೇಧ ಕಾಯ್ದೆಗೆ ಮೇಲ್ಮನೆಯಲ್ಲಿ ಅಂಗೀಕಾರ ಸಿಕ್ಕಿದೆ. ಆದರೆ, ಮತಾಂತರ ನಿಷೇಧ ಕಾಯ್ದೆಗೆ ಇನ್ನೂ ಸಿಕ್ಕಿಲ್ಲ.ವಿಧಾನ ಪರಿಷತ್ತಿನಲ್ಲಿ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪಿನ ವಿರುದ್ಧ ವಿರೋಧ ಪಕ್ಷ ನಡೆಯುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಬೇಕು ಮತ್ತು ಪಕ್ಷದ ಸಿದ್ಧಾಂತವನ್ನು ಬಲಪಡಿಸಬೇಕು ಎಂದು ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo