ಬೈಕ್ ಸವಾರ ಸ್ಕಿಡ್ ಆಗಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕಿನ ಪೆಟ್ರೋಲ್ ಟ್ಯಾಂಕ್ ಒಡೆದು ಬೆಂಕಿ ಕಾಣಿಸಿಕೊಂಡಿದೆ.
ಬಸ್ಸು ಹಾಗೂ ಬೈಕ್ ಎರಡು ವಾಹನಕ್ಕೂ ಬೆಂಕಿ ತಗುಲಿ ಬಸ್ ಬಾಗಶಃ ಸುಟ್ಟು ಕರಕಲಾಗಿದೆ. ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದು ಬಂದಿದೆ. ಖಾಸಗಿ ಬಸ್ ಇದಾಗಿದ್ದು ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕದಳ ಆಗಮಿಸಿ ಬೆಂಕಿ ಶಮನಗೊಳಿಸಿದೆ.
ಬಸ್ಸು ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ದುರ್ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ