Slider

ಉಡುಪಿ:-ನಿರಂತರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ 8-4-2022

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಯನ್ನು ಕೆಪಿಸಿಸಿ ಸೂಚನೆಯಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು  ಬೆಳಗ್ಗೆ ೯:೩೦ಕ್ಕೆ ಹಮ್ಮಿಕೊಂಡಿದೆ.

ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯಲ್ಲಿ ತೆರಳಿ ಅಜ್ಜರಕಾಡು ಹುತಾತ್ಮ ಸ್ಮಾರಕ ಚೌಕದ ಬಳಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ನಾಯಕರಾದ ಎಂ.ವೀರಪ್ಪ ಮೊಯ್ಲಿ, ಕೆ.ಪ್ರತಾಪಚಂದ್ರ ಶೆಟ್ಟಿ, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಂಜುನಾಥ ಭಂಡಾರಿ, ಗೋಪಾಲ ಪೂಜಾರಿ, ಯು.ಆರ್. ಸಭಾಪತಿ, ಎಂ.ಎ. ಗಫೂರ್, ವೆರೋನಿಕಾ ಕರ್ನೆಲಿಯೋ ಮುಂತಾದವರು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo