ಗೂಗಲ್ ಮ್ಯಾಪ್‌ನಲ್ಲಿ ಹೆಸರು ಬದಲಾಯಿಸಿದ ಬಗ್ಗೆ ದೇವಸ್ಥಾನದ ಆಡಳಿತ ಸಮಿತಿ ಮಂಗಳೂರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಗೂಗಲ್ ಮ್ಯಾಪ್‌ನಲ್ಲಿ ಕಿಡಿಗೇಡಿಗಳು ಸಾಮರಸ್ಯಕ್ಕೆ ಧಕ್ಕೆ ತರುವ ದುರುದ್ದೇಶದಿಂದ ಈ ಕೃತ್ಯವೆಸಗಿದ್ದಾರೆ. ಘಟನೆ ಗಮನಕ್ಕೆ ಬಂದ ತಕ್ಷಣ ದೇವಸ್ಥಾನದ ಆಡಳಿತ ಮಂಡಳಿ ಮ್ಯಾಪ್‌ನಲ್ಲಿ ಮರು ನಾಮಕರಣ ಪ್ರಕ್ರಿಯೆ ನಡೆಸಿ, ಗೂಗಲ್ ರಿವ್ಯೂ ಬಳಿಕ ಹೆಸರು ಬದಲಾವಣೆಯಾಗಲಿದೆ.
ಇತ್ತೀಚಿಗೆ ಈ ದೇವಸ್ಥಾನದ ಜಾತ್ರೆಯಲ್ಲಿ ಹಿಂದೂ ಸಂಘಟನೆಗಳು ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದೆ ವಿವಾದವೇರ್ಪಟ್ಟಿತ್ತು. ಇದೀಗ ಕಿಡಿಗೇಡಿಗಳು ಗೂಗಲ್ ಮ್ಯಾಪ್‌ನಲ್ಲಿ ಹೆಸರು ಬದಲಾಯಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ