ನಿಗಮದ ಈ ನೂತನ ಬಸ್‌ನಿಲ್ದಾಣವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎ.11ರ ಸೋಮವಾರ ಅಪರಾಹ್ನ 3.30ಕ್ಕೆ ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ ಬಸ್‌ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಬಸ್ ನಿಲ್ದಾಣ ಎಂದು ನಾಮಕರಣಕ್ಕೆ ಶಾಸಕ ಕೆ.ರಘುಪತಿ ಭಟ್ ಮಾಡಿಕೊಂಡ ಮನವಿಯ ಹಿನ್ನೆಲೆ ಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಕ.ರಾ.ರ.ಸಾ.ನಿಗಮದ ನಿರ್ದೇಶಕರ ಮಂಡಳಿ ತನ್ನ ಅನುಮೋದನೆ ನೀಡಿತ್ತು. ಇದಕ್ಕೆ ಒಪ್ಪಿಗೆ ಸೂಚಿಸಿದ ಮುಖ್ಯಮಂತ್ರಿಗಳು ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ