Slider

ಉಡುಪಿ:-ಜೂನ್ 1ರಿಂದ ಒಂದು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ 20+5-2022


 ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ.



ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಈ 61 ದಿನಗಳಲ್ಲಿ ನಿಷೇಧವಾಗಲಿದೆ.



ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.


ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. 



ಹೀಗಾಗಿ ಕರಾವಳಿ ಪ್ರದೇಶದ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo