ಉಡುಪಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.
ಅದರಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ, ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ